ಮಾರ್ಚ್ 2023 ರಲ್ಲಿ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಪುನರಾವರ್ತಿತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಕೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಆಗಸ್ಟ್ 2002 ರಲ್ಲಿ ನಡೆದ ದ್ವಿತೀಯ ಪಿಯಸಿ ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಂದ ಮಾರ್ಚ್ 2023 ರಲ್ಲಿ ನಡೆಸುವ ವಾರ್ಷಿಕ ಪರೀಕ್ಷೆಗೆ ಶುಲ್ಕ ಕಟ್ಟಲು ದಿನಾಂಕ 10:10: 2022 ರಿಂದ ಅವಕಾಶ ನೀಡಲಾಗಿದೆ.
ಪುನರಾವರ್ತಿತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಕುರಿತು, ಮಾರ್ಚ್ 2023 ರಲ್ಲಿ ನಡೆಸಲಾಗುವ ದ್ವಿತೀಯ ಪಿಯಸಿ ವಾರ್ಷಿಕ ಪರೀಕ್ಷೆಗೆ ಅನುತ್ತೀರ್ಣ ವಿದ್ಯಾರ್ಥಿಗಳು ಪಾವತಿಸಬೇಕಾದ ಶುಲ್ಕ ಮತ್ತು ಫಲಿತಾಂಶ ತಿರಸ್ಕರಣಾ ಶುಲ್ಕಗಳ ಮಾಹಿತಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಪರೀಕ್ಷಾ ಶುಲ್ಕ ( ಎಸ್.ಸಿ , ಎಸ್ ಟಿ ಹಾಗೂ ಪ್ರವರ್ಗ 1 ರ ವಿದ್ಯಾರ್ಥಿಗಳನ್ನು ಹೊರತುಪಡಿಸಿ)
ಒಂದು ವಿಷಯಕ್ಕೆ ರೂ.140
ಎರಡು ವಿಷಯಕ್ಕೆ ರೂ 270
ಮೂರು ಅಥವಾ ಹೆಚ್ಚಿನ ವಿಷಯಗಳು 400
ಎಸ್.ಸಿ , ಎಸ್ ಟಿ ಹಾಗೂ ಪ್ರವರ್ಗ 1 ರ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿ /ವಿದ್ಯಾರ್ಥಿನಿಯರಿಂದ ಕಡ್ಡಾಯವಾಗಿ ಸಲ್ಲಿಸಬೇಕಾದ ಅಂಕಪಟ್ಟಿ ಶುಲ್ಕ ರೂ 50.
ದಂಡ ಶುಲ್ಕವಿಲ್ಲದೇ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಪಾವತಿಗೆ 31:10:2022 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ನೋಡಬಹುದಾಗಿದೆ.