Subject: Circular regarding IIPUC Tentative Time Table for Annual Examination march – 2023
2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯು ಇಂದು ಬಿಡುಗಡೆ ಮಾಡಿದೆ.
ಪರೀಕ್ಷೆಯು 10.03.2023 ರಿಂದ 29.03.2023 ರವರೆಗೆ ನಡೆಸಲು ತೀರ್ಮಾನಿಸಲಾಗಿದ್ದು.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಪ್ರತಿದಿನ ಒಂದು ವಿಷಯಕ್ಕೆ ಮಾತ್ರ ನಡೆಯಲಿದ್ದು, ಬೆಳಿಗ್ಗೆ 10-15 ರಿಂದ ಮಧ್ಯಾಹ್ನ 01-30 ರವರೆಗೆ ಪರೀಕ್ಷೆ ನಡೆಯಲಿದೆ.
ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ,ಸಿ, ನಾಗೇಶ್ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಸದರಿ ವೇಳಾಪಟ್ಟಿಯನ್ನು ಕಾಲೇಜುಗಳ ಪ್ರಾಂಶುಪಾಲರುಗಳು, ಕಾಲೇಜಿನ ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಖುದ್ದಾಗಿ ಗಮನಿಸಲು ಸೂಚಿಸಿದೆ.
ಆಕ್ಷೇಪಣೆಗಳನ್ನು ದಿನಾಂಕ 21.11.2022 ರಂದು ಸಂಜೆ 5.30 ರ ಒಳಗಾಗಿ [email protected] ಮೇಲ್ ಗೆ ಕಳುಹಿಸಬುಹುದಾಗಿದೆ. ತದನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯು ತಿಳಿಸಿದೆ.